ಹೊಸ ದಿಗಂತ ವರದಿ ಬೆಳಗಾವಿ:
ಬೆಳಗಾವಿಯಲ್ಲಿ ಬಿಜೆಪಿ ಭಾನುವಾರ ಆಯೋಜಿಸಿರುವ ‘ಜನಸೇವಕ ಸಮಾವೇಶ ಸಮಾರೋಪ’ಕ್ಕೆ ಕುಂದಾನಗರಿ ಕೇಸರಿಮಯವಾಗಿದೆ.
ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ರಸ್ತೆ ವಿಭಜಕಗಳಲ್ಲಿ ಆ ಪಕ್ಷದ ಬಾವುಟಗಳು, ನಾಯಕರ ಕಟೌಟ್ಗಳು ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ.
ರಾಣಿ ಚನ್ನಮ್ಮ ವೃತ್ತದಲ್ಲಿರುವ ಪ್ರತಿಮೆಯ ಸ್ಥಳವನ್ನೂ ಬಿಜೆಪಿಯ ಬಾವುಟದ ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗಿದೆ. ಎಲ್ಲೆಡೆ ಕೇಸರಿಮಯ ವಾತಾವರಣ ಕಂಡುಬರುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸಚಿವ ಸಂಪುಟದ ಬಹುತೇಕ ಸದಸ್ಯರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಸೇರಿದಂತೆ ನೂರಾರು ಗಣ್ಯರು, ಸಹಸ್ರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.