Thursday, June 30, 2022

Latest Posts

ಜನ ಪ್ರತಿನಿಧಿಗಳಿಲ್ಲದ ಮಡಿಕೇರಿ ನಗರ ಸಭೆ: ಚುನಾವಣೆ ನಡೆಸಲು ನಗರ ಬಿಜೆಪಿ ಆಗ್ರಹ

ಹೊಸ ದಿಗಂತ ವರದಿ, ಮಡಿಕೇರಿ:

ಕಳೆದ ಎರಡು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದ ಮಡಿಕೇರಿ ನಗರಸಭೆಗೆ ಅತಿ ಶೀಘ್ರವೇ ಚುನಾವಣೆ ನಡೆಸಬೇಕೆಂದು ಮಡಿಕೇರಿ ನಗರ ಬಿಜೆಪಿ ಒತ್ತಾಯಿಸಿದೆ.
ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಅವರ ನೇತೃತ್ವದಲ್ಲಿ ಶುಕ್ರವಾರ ಶಾಸಕ ಎಂಪಿ.ಅಪ್ಪಚ್ಚುರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಪಕ್ಷದ ಪ್ರಮುಖರು, ಕಳೆದ ಎರಡು ವರ್ಷಗಳಿಂದ ಚುನಾಯಿತ ಪ್ರತಿನಿಧಿ ಗಳಿಲ್ಲದೆ ನಗರದ ಜನರ ಸಮಸ್ಯೆ ಗಳನ್ನು ನಿವಾರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಚುನಾವಣೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.
ನಿಯೋಗದಲ್ಲಿ ಪಕ್ಷದ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಸತೀಶ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ಪೂವಯ್ಯ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಸವಿತಾ ರಾಕೇಶ್, ನಗರ ಉಪಾಧ್ಯಕ್ಷ ಬಿ. ಕೆ. ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಕೆ. ಅಪ್ಪಣ್ಣ, ಉಮೇಶ್ ಸುಬ್ರಮಣಿ,ನಗರ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಪ್ರಮುಖರಾದ ರಾಕೇಶ್, ಕೆ. ಟಿ. ಪ್ರಶಾಂತ್, ಶ್ವೇತಾ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss