Sunday, August 14, 2022

Latest Posts

ಜಪಾನ್ ಪ್ರಧಾನಿ ಶಿಂಜೊ ಅನಾರೋಗ್ಯ: ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಪ್ರಧಾನಿ ಮೋದಿ!

ನವದೆಹಲಿ:  ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ.
ಜಪಾನಿನ ಧೀರ್ಘವಾಧಿಯ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಶಿಂಜೊ ಅಬೆ, ಅನಾರೋಗ್ಯದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.
ಆಪ್ತ ಸ್ನೇಹಿತ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದು ನೋವು ತಂದಿದೆ. ಇತ್ತೀಚಿನ ವರ್ಷಗಳಲ್ಲಿ ಅವರ ದಿಟ್ಟ ನಾಯಕತ್ವ ಮತ್ತು ವೈಯಕ್ತಿಕ ಬದ್ಧತೆಯಿಂದ ಉಭಯ ದೇಶಗಳ ನಡುವಣ ಸಂಬಂಧ ಗಟ್ಟಿಯಾಗಿತ್ತು. ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss