Saturday, January 23, 2021

Latest Posts

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ| ಇಬ್ಬರು ಯೋಧರು ಹುತಾತ್ಮ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

ಗಸ್ತು ತಿರುಗುತ್ತಿದ್ದ ಯೋಧರ ಮೇಲೆ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಯೋಧರು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೆ ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಶ್ಮೀರದ ಐಜಿ, ಭಾರತೀಯ ಯೋಧರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರು ಶಸ್ತ್ರಸಜ್ಜಿತರಾಗಿದ್ದು, ಬಳಿಕ ತಮ್ಮ ವಾಹನದಲ್ಲಿ ಪರಾರಿಯಾಗಿದ್ದಾರೆ. ಅವರಲ್ಲಿ ಇಬ್ಬರು ಪಾಕಿಸ್ತಾನಿಯರು ಹಾಗೂ ಓರ್ವ ಸ್ಥಳೀಯ ಉಗ್ರನಾಗಿದ್ದಾನೆ. ಸಂಜೆಯ ವೇಳೆಗೆ ಉಗ್ರರ ಗುಂಪನ್ನು ಗುರುತಿಸುತ್ತೇವೆ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!