Wednesday, June 29, 2022

Latest Posts

ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ದಾಳಿ: ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮ, ಬಾಲಕ ಸಾವು

ಶ್ರೀನಗರ: ಜಮ್ಮು -ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮನಾಗಿದ್ದು, ೪ ವರ್ಷದ ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ್ದಾನೆ.
ಇಂದು ಮಧ್ಯಾಹ್ನ ಸರಿ ಸುಮಾರು ೧೨.೧೫ ಗಂಟೆಗೆ ದಕ್ಷಿಣ ಕಾಶ್ಮೀರದ ಬಿಜ್ಬೆಹರಾ ಪ್ರದೇಶದಲ್ಲಿರುವ ಪಾಡ್‌ಶಾಹಿ ಬಾಗ್ ಸೇತುವೆ ಬಳಿ ರಸ್ತೆಯ ಲೋಕರ್ಪಣೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸಿಆರ್‌ಪಿಎಫ್ ಯೋಧರ ಗುಂಪನ್ನ ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ೯೦ ಬಿಟಾಲಿಯನ್ ಪಡೆದ ಸಿಆರ್‌ೞಪಿಎಫ್ ಯೋಧರೊಬ್ಬರು ಹಾಗೂ ನಾಲ್ಕು ವರ್ಷದ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ಆರಂಭಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss