ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾ ಬಳಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ.
ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಬಾನ್ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದ್ದು, ಭದ್ರತಾ ಪಡೆಗಳು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್ ಕೌಂಟರ್ ಆರಂಭಿಸಿದೆ. ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ನಾಗ್ರೋಟಾದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.