ಜಮ್ಮು ಕಾಶ್ಮೀರ: ಇಂದು ಶೋಪಿತಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ಉಗ್ರರ ಎನ್ ಕೌಂಟರ್ ನಲ್ಲಿ 5 ಮಂದಿ ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಶೋಪಿಯಾನ್ ಜಿಲ್ಲೆಯ ಸುಗೊ ಪ್ರದೇಶದಲ್ಲಿ ಉಗ್ರರು ಅಡಗಿರುವುದರ ಖಚಿತ ಮಾಹಿತಿ ಪಡೆದ ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದೆ. ಬುಧವಾರ ಮುಂಜಾನೆ ಸುಗೋ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, 5 ಮಂದಿ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.