ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಮತ್ತೆ ಉಗ್ರರು ಹಾಗೂ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ.
ಶೋಪಿಯಾನ್ ಜಿಲ್ಲೆಯ ಸುಗೊ ಪ್ರದೇಶದಲ್ಲಿ ಉಗ್ರರು ಅಡಗಿರುವುದರ ಖಚಿತ ಮಾಹಿತಿ ಪಡೆದ ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಸೇನೆ 2 ಉಗ್ರರನ್ನು ಹೊಡೆದುರುಳಿಸಿದೆ.
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿರುವುದಾಗಿ ಮಾಹಿತಿ ಪಡೆದಿದ್ದು, ಸೇನೆ ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿ ತಿಳಿಸಿದೆ.