Wednesday, June 29, 2022

Latest Posts

ಜಾನಪದ ಸಮ್ಮೇಳನ: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಮಂಜಮ್ಮ ಜೋಗತಿ

ಹೊಸದಿಗಂತ ವರದಿ, ಮಂಡ್ಯ:

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾದರಿಯಲ್ಲೇ ಜಾನಪದ ಸಮ್ಮೇಳನ ನಡೆಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿ ತಿಳಿಸಿದರು.

ನಗರದ ಕೆವಿಎಸ್ಸೆಸ್‍ಭವನದಲ್ಲಿ ನಂಜಮ್ಮ ಮೋಟೇಗೌಡ ಚಾರಿಟಬಲ್ ಮತ್ತು ಎಜುಕೇಷನ್ ಟ್ರಸ್ಟ್ ಕೊಪ್ಪ ಇವರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದ ಅವರು, ಈ ಹಿಂದೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾಗಿದ್ದ ಸಿ.ಟಿ. ರವಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅವರೂ ಭರವಸೆ ನೀಡಿದ್ದರು. ಆದರೆ ಅವರು ರಾಜೀನಾಮೆ ನೀಡಿದ ಬಳಿಕ ನೆನಗುದಿಗೆ ಬಿದ್ದಿದೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು. ಇದು ನನ್ನ ಬದುಕಿನ ಬಹುದೊಡ್ಡ ಕನಸು ಎಂದು ಹೇಳಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜಾನಪದ ಕಲಾವಿದರು ಇದ್ದಾರೆ. ಅವರ ಬಗ್ಗೆ ಯಾವುದೇ ನಿಖರ ದಾಖಲೆಗಳು ಇಲ್ಲ. ಈ ಬಗ್ಗೆ ಅಕಾಡೆಮಿ ವತಿಯಿಂದ ಸರ್ವೆ ಕಾರ್ಯ ನಡೆಸಿ ದಾಖಲಿಸಲಾಗುವುದು ಎಂದು ತಿಳಿಸಿದರು.

ಕಲೆ ಎನ್ನುವುದು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಆದರೆ ಕೆಲವರನ್ನು ಮಾತ್ರ ಅಪ್ಪಿಕೊಂಡು ಉತ್ತುಂಗ ಶಿಖರಕ್ಕೆ ಕೊಂಡೊಯ್ಯುತ್ತದೆ ಕಲೆಯನ್ನು ಯಾರು ಆರಾಧಿಸುತ್ತಾರೋ, ಪ್ರೀತಿಸುತ್ತಾರೋ, ಅದರಲ್ಲಿ ಸಾಧನೆ ಮಾಡುತ್ತಾರೋ ಅವರು ಆ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸುತ್ತಾರೆ. ಇದಕ್ಕೆ ನಾನೇ ಸಾಕ್ಷಿ ಎಂದು ಉದಾಹರಣೆ ಸಹಿತ ವಿವರಿಸಿದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss