ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದು. ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.
2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿತ್ತು ಹಾಗಾಗಿ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ನಬ್ ಗೋಸ್ವಾಮಿ ತಮ್ಮ ಮನವಿಯಲ್ಲಿ ವಕೀಲ ನಿರ್ನಿಮೇಶ್ ದುಬೆ ಅವರ ಮೂಲಕ ಮಹಾರಾಷ್ಟ್ರ ಸರ್ಕಾರ, ಮುಂಬೈ ಪೊಲೀಸ್, ಕೇಂದ್ರ ಸರ್ಕಾರ ಮತ್ತಿತರನ್ನು ಇದಕ್ಕೆ ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ.
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಕಳೆದ ವಾರ ವಶಕ್ಕೆ ಪಡೆದುಕೊಂಡಿತ್ತು.