Tuesday, July 5, 2022

Latest Posts

ಜಿಯೋ ಸಿಮ್ ನಿಂದ ಪೋರ್ಟ್ ಆಗಲು ಮುಂದಾದ ರೈತ ಸಂಘದ ನೂರಾರು ಕಾರ್ಯಕರ್ತರು

ಹೊಸದಿಗಂತ ವರದಿ, ಶಿವಮೊಗ್ಗ:

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೈತ ಸಂಘದ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್ನಿಂದ ಪೋರ್ಟ್ ಆಗಲು ಮುಂದಾಗಿದ್ದಾರೆ.
ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್ನಿಂದ ಏರ್ಟೆಲ್ ಸಿಮ್ ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.
ನಗರದ ಶಿವಮೂರ್ತಿ ಸರ್ಕಲ್ ನಲ್ಲಿರುವ ಏರ್ ಟೆಲ್ ಕಚೇರಿ ಮುಂದೆ ಕಾರ್ಯಕರ್ತರೊಂದಿಗೆ ಎಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ತಮ್ಮ ಜಿಯೋ ನಂಬ್ನಿಂದ ಹೊರಬಂದು ಏರ್ಟೆಲ್ ಚಂದಾದಾರರಾದರು.
ಈ ಸಂದರ್ಭದಲ್ಲಿ  ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಎಮ್.ಶಿವಮೂರ್ತಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀ್, ಜಿಲ್ಲಾ ಮುಖಂಡರಾದ ಪಿ.ಶೇಖರಪ್ಪ, ಎಂ.ಡಿ ನಾಗರಾಜ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss