Monday, July 4, 2022

Latest Posts

ಜಿಲ್ಲಾಧಿಕಾರಿ ಪ್ರಾಥಮಿಕ ಸಂಪರ್ಕ: ಪಿಣರಾಯಿ ಸಹಿತ ಮೂವರು ಸಚಿವರು ಸ್ವಯಂ ಕ್ವಾರಂಟೈನ್‌ಗೆ

ತಿರುವನಂತಪುರಂ: ಏರ್ ಇಂಡಿಯಾ ವಿಮಾನ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಮೂವರು ಸಚಿವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಕೆಲವು ದಿನಗಳ ಹಿಂದೆ ಏರ್ ಇಂಡಿಯಾ ವಿಮಾನ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆರೋಗ್ಯ ಸಚಿವೆ ಕೆ. ಕೆ. ಶೈಲಜಾ ಸೇರಿದಂತೆ ಸಚಿವರು, ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು. ಅಲ್ಲದೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಶುಕ್ರವಾರ ಮಲಪ್ಪುರಂ ಜಿಲ್ಲಾಧಿಕಾರಿ ಕೆ. ಗೋಪಾಲಕೃಷ್ಣನ್ ಸೇರಿದಂತೆ 22 ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ. ಎಲ್ಲರೂ ಜಿಲ್ಲಾಧಿಕಾರಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಮತ್ತು ಮೂವರು ಸಚಿವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss