Monday, July 4, 2022

Latest Posts

ಜೂನ್ 30ರ ವರೆಗೆ ಮೈಸೂರಿನಲ್ಲಿ ನಿಷೇಧಾಜ್ಞೆ

ಮೈಸೂರು: ಕೊರೋನಾ ಹರಡುವಿಕೆ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ಮುಂಜಾಗ್ರತಾ ಕ್ರಮವಾಗಿ ಮೈಸೂರು ನಗರದಲ್ಲಿ ಜೂನ್ 30 ವರೆಗೆ ಪ್ರತಿದಿನ ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಸೆಕ್ಸನ್ 144 ನಿಷೇಧಾಜ್ಞೆ  ಮಾಡಿದ್ದು, ಅಗತ್ಯ ಸೇವೆಗಳಿಗೆ ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಲಾಕ್‍ಡೌನ್ ಅವಧಿಯ ವ್ಯಾಪಾರ ಮಳಿಗೆಗಳ ಮಳಿಗೆದಾರರು ಪ್ರತಿ ಗ್ರಾಹಕರ ಮಧ್ಯೆ 6 ಅಡಿ ಅಂತರ ಕಾಯ್ದುಕೊಳ್ಳುವಂತೆ ನಿಗಾ ವಹಿಸುವುದು ಹಾಗೂ 5 ಕ್ಕಿಂತ ಹೆಚ್ಚು ಗ್ರಾಹಕರು ಒಮ್ಮೆಲೇ ಸೇರದಂತೆ ಜವಾಬ್ದಾರಿ ವಹಿಸುವುದು. ಇದು ತಪ್ಪಿದಲ್ಲಿ ಮಳಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ಅವಧಿಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಡುವುದನ್ನು ನಿಷೇಧಿಸಲಾಗಿದೆ.
ಯಾವುದೇ ಸಾಮಗ್ರಿಗಳನ್ನು ಕೊಳ್ಳಲು ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕರು ಮತ್ತು ಮಳಿಗೆದಾರರು ತಮ್ಮ ದಿನನಿತ್ಯದ ಕೆಲಸ ಹಾಗೂ ವ್ಯಾವಹಾರವನ್ನು ರಾತ್ರಿ 9 ಗಂಟೆಯೊಳಗೆ ಪೂರ್ಣಗೊಳಿಸಿ, ನಿಷೇಧಾಜ್ಞೆ ಪ್ರಾರಂಭದ ಸಮಯಕ್ಕೆ ಮೊದಲೇ ಮನೆಗಳಲ್ಲಿರತಕ್ಕದ್ದು ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಶುಚಿತ್ವ, ಸಾರ್ವಜನಿಕ ಅಂತರ ಕಾಯ್ದುಕೊಳ್ಳಬೇಕು. ಈ ಸೂಚನೆಯನ್ನು ಪಾಲಿಸದೆ ಇರುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss