Wednesday, July 6, 2022

Latest Posts

ಜೂನ್ 8 ರಿಂದ ಕರ್ನಾಟಕ ಪ್ರಾಧಿಕಾರದ ವ್ಯಾಪ್ತಿಯ ಎಲ್ಲಾ ಮೃಗಾಲಯ ಸಾರ್ವಜನಿಕರ ವೀಕ್ಷಣೆಗೆ ಲಭ್ಯ: ಬಿ.ಪಿ.ರವಿ

ಮೈಸೂರು: ಕೋವಿಡ್-19 ರ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ-ರಾಜ್ಯ ಸರ್ಕಾರಗಳ ನಿರ್ದೇಶನದನ್ವಯ ಮುಚ್ಚಲ್ಪಟ್ಟಿದ್ದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಯ ಎಲ್ಲಾ ಮೃಗಾಲಯಗಳನ್ನು ಲಾಕ್‍ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಜೂನ್ 8 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಜೈವಿಕ ಉದ್ಯಾನಗಳು, ಮೃಗಾಲಯಗಳು, ಪಕ್ಷಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳನ್ನು ಸಾರ್ವಜನಿಕರ ವೀಕ್ಷಣೆಗೆ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ, ಷರತ್ತುಗಳೊಂದಿಗೆ ಸಾರ್ವಜನಿಕರ ವೀಕ್ಷಣೆಗೆ ಪುನರಾಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss