Wednesday, August 17, 2022

Latest Posts

ಜೂ. 14ರಂದು ದೇಶದಾದ್ಯಂತ ವರ್ಚುವಲ್ rally: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗಿ

ಉಡುಪಿ: ಕೇಂದ್ರ ಬಿಜೆಪಿ ನೇತೃತ್ವದ ಸರಕಾರದ 2ನೇ ಅವಧಿಯ ಒಂದು ವರ್ಷದ ಪ್ರಧಾನಿ ನರೇಂದ್ರ ಮೋದಿ ಅವರ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಅಭಿಯಾನದ ಸಮಾರೋಪ ಜೂ. 14ರಂದು ದೇಶದಾದ್ಯಂತ ವರ್ಚುವಲ್ rally ಮೂಲಕ ನಡೆಯಲಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ದೇಶದಾದ್ಯಂತ ಕೋಟ್ಯಾಂತರ ಮಂದಿ ಬಿಜೆಪಿ ಕಾರ್ಯಕರ್ತರು ಸಿಸ್ಕೋ ವೆಬೆಕ್ಸ್ ಮೀಟಿಂಗ್ ಎಂಬ ಆ್ಯಪ್ ಮೂಲಕ ಈ rallyಯಲ್ಲಿ ಭಾಗವಹಿಸಲಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಲ್ಲದೇ 100 ಮಂದಿ ವಿವಿಧ ಕ್ಷೇತ್ರಗಳ ತಜ್ಞರು – ಚಿಂತಕರು ಪಕ್ಷದ ಆಹ್ವಾನದ ಮೇರೆಗೆ ಈ rallyಯಲ್ಲಿ ಭಾಗವಹಿಸುತ್ತಾರೆ. rallyಯಲ್ಲಿ ಭಾಗವಹಿಸಲು ಆ್ಯಪ್ ಡೌನ್‌ಲೋಡ್ ಮಾಡಿ, ಮಂಡಲ ಪ್ರಮುಖರಿಂದ ಪಾಸ್‌ವರ್ಡ್ ಪಡೆಯಬೇಕು ಎಂದು ಶಾಸಕರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ rallyಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರ.ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡ ಭಾಷಣ ಮಾಡಲಿದ್ದಾರೆ. ರಾಜ್ಯದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಈ ಕಾರ್ಯಕ್ರಮ ನೇರಪ್ರಸಾರ ಇರುತ್ತದೆ ಎಂದು ಹೇಳಿದರು.
ದೇಶದಲ್ಲಿ 20 ಲಕ್ಷ ಕೋಟಿ ರೂ.ಗಳ ಕೊರೋನಾ ಪ್ಯಾಕೇಜ್ ನೀಡಿದ ಪ್ರಧಾನಿ ಮೋದಿ ಅವರು, ಕೊರೋನಾ ನಿರ್ವಹಣೆಯಲ್ಲಿ ವಿಶ್ವಕ್ಕೆ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ ಶಾಸಕ ರಘುಪತಿ ಭಟ್, ಯುಪಿಎ ಸರಕಾರದ ಅವಧಿಯಲ್ಲಿ ಅಡುಗೆ ಅನಿಲ ಮತ್ತು ವಿದ್ಯುತ್ ಪೂರೈಕೆ ಕೃತಕ ಅಭಾವದಿಂದಾಗಿ ಜನಜೀವನಕ್ಕೆ ತೊಂದರೆಯನ್ನುಂಟು ಮಾಡಿತ್ತು. ಆದರೆ ಈಗ ಯಥೇಚ್ಛವಾಗಿದೆ. ಆಗ ದಿನಕ್ಕೆ 13 ಕಿ.ಮೀ.ನಷ್ಟು ನಿರ್ಮಾಣವಾಗುತ್ತಿದ್ದ ರಾ.ಹೆ. ಈಗ 30 ಕಿ.ಮೀ. ನಿರ್ಮಾಣವಾಗುತ್ತಿದೆ. ಇದರಿಂದ ಮೋದಿ ಜನಸಾಮಾನ್ಯರಲ್ಲಿ ಜನಪ್ರಿಯರಾಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಬಿಜೆಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರ.ಕಾರ್ಯದರ್ಶಿ ದಿನೇಶ್ ಅಮೀನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್ ಆಂಚನ್, ಮಂಜುನಾಥ್ ಮಣಿಪಾಲ ಮುಂತಾದವರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!