Thursday, February 25, 2021

Latest Posts

ಜೆಡಿಎಸ್ ಗೆ ಸಭಾಪತಿ: ಬಿಜೆಪಿ ಗೆ ಉಪ ಸಭಾಪತಿ ಸ್ಥಾನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ವಿಧಾನಪರಿಷತ್ ಸಭಾಪತಿ, ಉಪಸಭಾಪತಿ ಆಯ್ಕೆ ಕುರಿತಂತೆ ಅಂತಿಮ ನಿರ್ಧಾರವಾಗಿದ್ದು, ವಿಧಾನಪರಿಷತ್‌ ಸಭಾಪತಿ ಸ್ಥಾನವನ್ನು ಬಿಜೆಪಿ ಕೊನೆಗೂ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಇನ್ನು ಉಪ ಸಭಾಪತಿ ಸ್ಥಾನದ ಚುನಾವಣೆಗೆ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಲು ಜೆಡಿಎಸ್​ನ ಬಸವರಾಜ್ ಹೊರಟ್ಟಿ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಪರ್ಯಾಯವಾಗಿ ಉಪಸಭಾಪತಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ. ಈಗಾಗಲೇ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಪದಚ್ಯುತಿಗೆ ಬಿಜೆಪಿ ನೋಟಿಸ್ ಕೊಟ್ಟಿದೆ. ಬಹುಮತ ಇಲ್ಲದ ಕಾರಣ ಬಿಜೆಪಿಗೆ ಜೆಡಿಎಸ್‌ ಅನಿವಾರ್ಯವಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಚಿಕ್ಕಮಗಳೂರಿನ ಎಂ.ಕೆ.ಪ್ರಾಣೇಶ್‌ ಉಪ ಸಭಾಪತಿ ಸ್ಥಾನಕ್ಕೆ ಗುರುವಾರ 10 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!