Saturday, July 2, 2022

Latest Posts

ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ರಾಜಿನಾಮೆ

ಬೆಂಗಳೂರು: ಜೆಡಿಎಸ್ ನ ಮೇಲ್ಮನೆ ಮಾಜಿ ಸದಸ್ಯ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೂ, ವಿಧಾನ ಪರಿಷತ್ತಿನಲ್ಲಿ ಪೂರ್ಣಾವಧಿ ಕಾರ್ಯನಿರ್ವಹಿಸಲು ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ರಮೇಶ್ ಬಾಬು ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ 2,203 ಮತಗಳ ಅಂತರದಿಂದ ಜಯ ಗಳಿಸಿದ್ದ ರಮೇಶ್ ಬಾಬು ಅವರು ಪಕ್ಷದ ವರಿಷ್ಠರಾದ ಎಚ್.ಡಿ. ದೇವೆಗೌಡರಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss