ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಸಿ. ಚನ್ನಿಗಪ್ಪ ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಿಗಪ್ಪ ಅವರಿಗೆ ಸಿಂಗಾಪುರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಪೊಲೀಸ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿ. ಚನ್ನಿಗಪ್ಪರವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿ ರಾಜಕೀಯಕ್ಕೆ ಪ್ರವೇಶಿಸಿದರು. ಚನ್ನಗಪ್ಪ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 3 ಭಾರಿ ಶಾಸಕರಾಗಿಒ ಆಯ್ಕೆಯಾಗಿದ್ದರು, 2006ರ ಕುಮಾರಸ್ವಾಮಿ(ಜೆಡಿಎಸ್-ಕಾಂಗ್ರೆಸ್) ಸರ್ಕಾರದ ಅವಧಿಯಲ್ಲಿ ಅರಣ್ಯ ಸಚಿವರಾಗಿದ್ದರು.
ಜೆಡಿಎಸ್ ನ ಹಿರಿಯ ಮುಖಂಡ ಹಾಗೂ ಸಚಿವ ಸಿ.ಚನ್ನಿಗಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.