ಜೈಪುರ: ಸೆಪ್ಟೆಂಬರ್ 1 ರಿಂದ ರಾಜಸ್ಥಾನ ಸರ್ಕಾರ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ರಾಜ್ಯದ ಗೃಹ ಇಲಾಖೆ ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಲಿದೆ.
ರಾಜಸ್ಥಾನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಧಾರ್ಮಿಕ ಸ್ಥಳಗಳನ್ನು ತೆರೆಯುವ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಸೂಚಿಸಿದರು ಮತ್ತು ಸಾಮಾಜಿಕ ಅಂತರ ಸೇರಿದಂತೆ ಇತರೆ ಆರೋಗ್ಯ ಪ್ರೋಟೋಕಾಲ್ ಗಳನ್ನು ಅನುಸರಿಸಬೇಕಾಗಿ ಸೂಚಿಸಿದರು.
ಆಗಸ್ಟ್ 31 ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಗ್ರಾಮ ರಕ್ಷಕ್ ರನ್ನು ಆಯ್ಕೆ ಮಾಡುವಂತೆ ಸಿಎಂ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಗ್ರಾಮ ಕಾವಲುಗಾರರು ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದು, ಇದು ಸಾರ್ವಜನಿಕರಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ.
ಉಸ್ತುವಾರಿ ಕಾರ್ಯದರ್ಶಿ ಆಗಸ್ಟ್ 31 ರಿಂದ ಎರಡು ದಿನಗಳ ಭೇಟಿಗೆ ಹೋಗಬೇಕು ಮತ್ತು ಎಲ್ಲಾ ವ್ಯವಸ್ಥೆಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ಗೆಹ್ಲೋಟ್ ನಿರ್ದೇಶನ ನೀಡಿದರು.
ಭೇಟಿಯ ಸಮಯದಲ್ಲಿ, ಅವರು ಜಾಗೃತಿ ಅಭಿಯಾನ, ವೈದ್ಯಕೀಯ ಸಂಪನ್ಮೂಲಗಳ ಸ್ಥಿತಿ, ಪ್ಲಾಸ್ಮಾ ಚಿಕಿತ್ಸೆ ಸೇರಿದಂತೆ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಬೇಕು ಮತ್ತು ಅಗತ್ಯತೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವು ಮೂಡಿಸಬೇಕು ಎಂದು ಗೆಹ್ಲೋಟ್ ಹೇಳಿದರು.