Thursday, August 18, 2022

Latest Posts

ಜೋ ಬಿಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಟ್ರಂಪ್ ಪಾಲ್ಗೊಳ್ಳುವುದಿಲ್ಲ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬಿಡೆನ್ ಅವರು ಜ.20ರಂದು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಲಿದ್ದು, ಬಿಡೆನ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ಕುರಿತು ಟ್ರಂಪ್ ಪದೇ ಪದೇ ಅಸಮಾಧಾನ ವ್ಯಕ್ತಪಡಿಸುತ್ತಲ್ಲೇ ಬಂದಿದ್ದರು. ಬಳಿಕ ಸಾಮಾಜಿಕ ಜಾಲತಾಣ ಹಾಗೂ ಭಾಷಣಗಳ ಮೂಲಕ ತಮ್ಮ ಬೆಂಬಲಿಗರಿಗೆ ಅಮೆರಿಕ ಸಂಸತ್ ನಲ್ಲಿ ಗಲಭೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಟ್ರಂಪ್ ಅವರ ಎಲ್ಲಾ ಸಾಮಾಜಿಕ ಜಾಲತಾಣಗಳನ್ನು ಸ್ಥಗಿತಗೊಳಿಸಲಾಗಿದೆ.

ಇದೀಗ ಜ.20ರಂದು ನಡೆಯಲಿರುವ ಜೋ ಬಿಡೆನ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!