Monday, August 8, 2022

Latest Posts

ಜೋ ಬೈಡನ್ ಗೆಲುವನ್ನು ಅಧಿಕೃತವಾಗಿ ಒಪ್ಪಿಕೊಳ್ಳಲು ನಿರಾಕರಿಸಿದ ಚೀನಾ!

ಹೊಸ ದಿಂಗತ ಆನ್ ಲೈನ್ ಡೆಸ್ಕ್:

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ವಿಜಯವನ್ನು ಅಧಿಕೃತವಾಗಿ ಒಪ್ಪಿಕೊಳ್ಳಲು ಚೀನಾ ನಿರಾಕರಿಸಿದೆ.
ಟ್ರಂಪ್ ಅವರ ‘ಅಮೆರಿಕ ಫಸ್ಟ್​’​ ನೀತಿ, ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹಿಂದೆ ಸರಿದ ಕ್ರಮ, ನ್ಯಾಟೋ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ವಿರೋಧ ಮುಂತಾದ ವಿಚಾರಗಳ ಬಗ್ಗೆ ಕೆಲವು ರಾಷ್ಟ್ರಗಳು ಡೊನಾಲ್ಡ್​ ಟ್ರಂಪ್ ನಿಂತಿದ್ದವು. ಈ ರಾಷ್ಟ್ರಗಳೂ ಬೈಡನ್ ಗೆಲುವನ್ನು ಒಪ್ಪಿಕೊಳ್ಳುತ್ತಿಲ್ಲ.ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಬೈಡನ್ ವಿಜಯವನ್ನು ಘೋಷಿಸಿಕೊಂಡಿದ್ದಾರೆ. ಅಮೆರಿಕದ ಕಾನೂನುಗಳಿಗೆ ಅನುಗುಣವಾಗಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ ಎಂದು ನಮಗೆ ಅರ್ಥವಾಗಿದೆ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ವ್ಯಾಂಗ್​ ವೆನ್​ಬಿನ್ ಹೇಳಿದ್ದಾರೆ.
ಸೋಮವಾರ ಬೀಜಿಂಗ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೋ ಬೈಡನ್​ಗೆ ಚೀನಾ ಅಭಿನಂದನೆ ತಿಳಿಸದಿರುವುದಕ್ಕೆ ಸ್ಪಷ್ಟನೆ ನೀಡಿದರು.
ಡೊನಾಲ್ಡ್​ ಟ್ರಂಪ್​ ಇನ್ನೂ ಸೋಲನ್ನು ಒಪ್ಪಿಕೊಂಡಿಲ್ಲ. ಕಾನೂನು ಸಮರ ನಡೆಸಲು ಡೊನಾಲ್ಡ್ ಟ್ರಂಪ್ ಸಿದ್ಧತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಚೀನಾ ಜೋ ಬೈಡನ್ ಅವರ ಗೆಲುವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ರಷ್ಯಾ, ಬ್ರೆಜಿಲ್ ಮತ್ತು ಮೆಕ್ಸಿಕೊ ರಾಷ್ಟ್ರಗಳ ಗುಂಪಿಗೆ ಸೇರಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss