Sunday, August 14, 2022

Latest Posts

ಜ.1ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲವೂ ಉಚಿತ: ಸಚಿವ ಡಾ.ಕೆ.ಸುಧಾಕರ್

 ಹೊಸದಿಗಂತ ವರದಿ, ಮೈಸೂರು:

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಿoದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತನಕ ಎಲ್ಲಾ ಪರೀಕ್ಷೆಗಳನ್ನು ಬರುವ ಉಚಿತವಾಗಿ ಮಾಡಲಾಗುತ್ತದೆ. ಸಾರ್ವಜನಿಕರಿಂದ ಒಂದು ರೂ. ಶುಲ್ಕ ಪಡೆಯದಂತೆ ಆರಂಭಿಸುವ ವ್ಯವಸ್ಥೆಯನ್ನು ಜ.೧ರಂದು ಘೋಷಿಸಲಾಗುವುದು ಎಂದು ಅರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬುಧವಾರ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾಲಯದ ಡೀನ್ ಕಚೇರಿಯಲ್ಲಿ ಕಾಲೇಜು ಮತ್ತು ಅಂಗ ಆಸ್ಪತ್ರೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆ ಸೇರದಂತೆ ಯಾವುದೇ ಪರೀಕ್ಷೆಗಳನ್ನು ಮಾಡದೆ, ಖಾಸಗಿ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಕೆಲವು ಲ್ಯಾಬ್‌ಗಳಿಗೆ ಸರ್ಕಾರಿ ವೈದ್ಯರೇ ಪಾಲುದಾರರಾಗಿದ್ದಾರೆ. ಹಾಗಾಗಿ, ಇದನ್ನು ತಪ್ಪಿಸಲು ಜ.೧ರಿಂದ ರಕ್ತಪರೀಕ್ಷೆ, ಎಂಆರ್‌ಐ, ಸಿಟಿ ಸ್ಕ್ಯಾನ್ ಸೇರಿ ಯಾವುದೇ ತರಹದ ಪರೀಕ್ಷೆಗಳಿಗೂ ಶುಲ್ಕ ಪಡೆಯುವಂತಿಲ್ಲ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳ ನೂರು ಮೀಟರ್ ದೂರದ ಒಳಗೆ ಯಾವುದೇ ಖಾಸಗಿ ಮೆಡಿಕಲ್ ಷಾಪ್ ಇರಬಾರದು. ಸರ್ಕಾರ ನೀಡುವ ಔಷಧ, ವೈದ್ಯಕೀಯ ಉಪಕರಣಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಕೊಡಲು ಹಾಗೂ ಮಾನಿಟರಿಂಗ್ ಮಾಡಲು ಸಮಿತಿಗಳನ್ನು ರಚಿಸಲಾಗುವುದು ಎಂದು ಹೇಳಿದರು.
ಮೈಸೂರಿನಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಕ್ಷಣವೇ ವೈದ್ಯಕೀಯ ಅಧೀಕ್ಷಕರನ್ನು ನೇಮಿಸಲಾಗುವುದು. ಕಟ್ಟಡಕ್ಕೆ ಬೇಕಾದ ಉಪಕರಣಗಳ ಖರೀದಿಗೆ ಟೆಂಡರ್ ಕರೆದಿರುವ ಹಿನ್ನೆಲೆಯಲ್ಲಿ ಅದಷ್ಟು ಬೇಗನೆ ಸೇವೆ ಆರಂಭಿಸುವoತೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ಮೆಡಿಕಲ್ ಕಾಲೇಜು ಮಾದರಿಯಲ್ಲೇ ಸ್ಕಿಲ್ ಲ್ಯಾಬ್ ಅನ್ನು ಎಂಎoಸಿಯಲ್ಲಿ ಆರೋಗ್ಯ ವಿವಿ ಮೂಲಕ ಸ್ಥಾಪಿಸಲಾಗುವುದು. ಇಲ್ಲಿನ ೪ ಆಸ್ಪತ್ರೆಗಳ ಮೇಲುಸ್ತುವಾರಿಗೆ ವಿಶೇಷ ಸಮಿತಿಗಳನ್ನು ರಚಿಸಲಾಗುವುದು ಎಂದ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss