ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜನವರಿ 1 ರಿಂದ ಶಾಲಾ ಕಾಲೇಜು ಓಪನ್ ಆಗಲಿದೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ 1ರಿಂದ ಶಾಲೆ -ಕಾಲೇಜು ಆರಂಭವಾಗಲಿದೆ. ಈ ಬಗ್ಗೆ ನಡೆಸಿರುವ ಸಿದ್ಧತೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಆದರೆ ಶಾಲಾ ಆರಂಭದ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಗೆಯೇ ನಿನ್ನೆ ಮುಗಿದ ಗ್ರಾ.ಪಂ. ಚುನಾವಣೆಯ ಬಗ್ಗೆ ಮಾತನಾಡಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.