Tuesday, August 16, 2022

Latest Posts

ಜ.10ರಂದು ಹಸಿರು ಮಾರ್ಗದಲ್ಲಿ 2 ತಾಸು ಮೆಟ್ರೋ ಸಂಚಾರ ಸ್ಥಗಿತ

ಹೊಸ ದಿಗಂತ ಆನ್ ಡೆಸ್ಕ್:

ಜ.10ರಂದು ನಮ್ಮ ಮೆಟ್ರೋ ಹಸಿರು ಮಾರ್ಗದ ಬನಶಂಕರಿ ಮತ್ತು ಜಯನಗರ ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ್ಯಾಷನಲ್‌ ಕಾಲೇಜು ನಿಲ್ದಾಣದಿಂದ ಯಲಚೇನಹಳ್ಳಿಯವರೆಗೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.
ಈ ಎರಡು ನಿಲ್ದಾಣಗಳ ನಡುವೆ ಅಂದು ಬೆಳಿಗ್ಗೆ 7ರಿಂದ 9ರವರೆಗೆ, ಅಂದರೆ ಎರಡು ತಾಸು ಮಾತ್ರ ಸಂಚಾರ ಸ್ಥಗಿತಗೊಳ್ಳಲಿದೆ. ನ್ಯಾಷನಲ್‌ ಕಾಲೇಜು ನಿಲ್ದಾಣದಿಂದ ನಾಗಸಂದ್ರ ನಿಲ್ದಾಣದವರೆಗೆ ರೈಲು ಸೇವೆ ಎಂದಿನಂತಿರುತ್ತದೆ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನೂ ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸೇವೆ ಮುಂದುವರೆಯಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss