Monday, July 4, 2022

Latest Posts

ಟಿಡಿಪಿ ನಾಯಕನ ಭೀಕರ ಹತ್ಯೆ: ರಾಜಕೀಯ ವೈಷಮ್ಯವೇ ಕಾರಣನಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಪಲ್ನಾಡಿಯಲ್ಲಿ “ತೆಲುಗುದೇಶಂ” ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ ಮಾಜಿ ಸರ್ಪಂಚ್ ಪುರನ್‌ಸೆಟ್ಟಿ ಅಂಕುಲು ಅವರನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಭಾನುವಾರ 8 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ರಾಜಕೀಯ ವೈಷಮ್ಯ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಾಥಮಿಕ ತನಿಖೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸೂಕ್ತ ತನಿಖೆ ನಡೆಸಿ ಸತ್ಯಾಂಶ ಹೊರಗೆಳೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss