ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಟೋಕಿಯೋ ಪ್ಯಾರಾಲಿಂಪಿಕ್ಸ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಲ್ 3 ಫೈನಲ್ ಪಂದ್ಯದಲ್ಲಿ ಭಾರತದ ಪ್ರಮೋದ್ ಭಗತ್ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಫೈನಲ್ಸ್ ನಲ್ಲಿ ಬ್ರಿಟನ್ ನ ಡಾನಿಯಲ್ ಬೆಥೆಲ್ ಅವರನ್ನುಸೋಲಿಸುವ ಮೂಲಕ ಭಾರತಕ್ಕೆ ಗೆಲುವಿನ ಗರಿ ಪಡೆದಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಭಾರತಕ್ಕೆ 16 ಮೆಡಲ್ ಪಡೆದುಕೊಂಡಂತಾಗಿದೆ.
ಸೆಮಿ ಫೈನಲ್ಸ್ ನಲ್ಲಿ ಜಪಾನ್ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದರು.