ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ಹಿಂಸಾಚಾರ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಸಿದಂತೆ ಅಮಿತ್ ಶಾ ಅಧಿಕಾರಿಗಳು, ಗುಪ್ತಚರ ಇಲಾಖೆ ಹಾಗೂ ದೆಹಲಿ ಪೊಲೀಸರೊಂದಿಗೆ ಸಭೆ ನಡೆಸಿ, ಅಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಿದರು.
ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾಪಡೆಯನ್ನು ನಿಯೋಜಿಸುವಂತೆ ಶಾ ಆದೇಶಿಸಿದ್ದು, ಕಾನೂನು ಸುವ್ಯವಸ್ಥೆ ಶೀಘ್ರದಲ್ಲಿಯೇ ಸಹಜ ಸ್ಥಿತಿಗೆ ಬರಲಿದೆ ಎಂದು ಭರವಸೆ ನೀಡಿದ್ದಾರೆ.
ಹಿಂಸಾಚಾರ ಸಂಭವಿಸಿದ ಐಟಿಒ, ನಂಗ್ಲೋಯಿ, ಗಾಜಿಪುರ ಮತ್ತಿತರ ಕಡೆಗಳಲ್ಲಿ ಸುಮಾರು 15 ಹೆಚ್ಚುವರಿ ಅರೆಸೇನಾಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ಐದು ಸಿಆರ್ ಪಿಎಫ್, 15 ಕೇಂದ್ರ ಶಸ್ತ್ರಸಜ್ಜಿತ ಪೊಲೀಸ್ ಪಡೆಯ ತುಕಡಿಗಳನ್ನು ಸೋಮವಾರದಿಂದಲೇ ನಿಯೋಜಿಸಲಾಗಿದೆ.