Sunday, August 14, 2022

Latest Posts

ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ| ತನಿಖೆ ಬಳಿಕ ಸಿಇಒ ಮೇಲೆ ಕ್ರಮ: ಸಿಎಂ ಬಿಎಸ್ ವೈ ಭರವಸೆ ಹಿನ್ನೆಲೆ ವೈದ್ಯರ ಮುಷ್ಕರ ವಾಪಸ್

ಮೈಸೂರು: ಜಿಲ್ಲೆಯ ನಂಜನಗೂಡಿನ ತಾಲೂಕು ವೈದ್ಯಾಧಿಕಾರಿ ಡಾ.ನಾಗೇಂದ್ರರ ಆತ್ಮಹತ್ಯೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಬಳಿಕ ನಿರ್ಗಮಿತ ಜಿ.ಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕೆಲ ಷರತ್ತುಗಳನ್ನು ಹಾಕಿ ಹಾಗೂ ಸಾರ್ವಜನಿಕರ ಹಿತಾದೃಷ್ಠಿಯಿಂದ ಕಳೆದ ನಾಲ್ಕು ದಿನಗಳ ನಡೆಸಲಾಗುತ್ತಿದ್ದ ಪ್ರತಿಭಟನೆಯಿಂದ ವೈದ್ಯರು ಹಿಂದೆ ಸರಿದಿದ್ದಾರೆ. ಅಲ್ಲದೆ ಕೆಲವು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲು ತೀರ್ಮಾನಿಸಿದ್ದಾರೆ.

ನಂಜನಗೂಡು ಟಿಎಚ್‌ಒ ಡಾ.ನಾಗೇಂದ್ರ ಆತ್ಮಹತ್ಯೆ ಸಂಬಂಧಿಸದಂತೆ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಸಿಎಂ ನೀಡಿದ ಭರವಸೆ ಮೇಲೆ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲು ತೀರ್ಮಾನಿಸಿದರು. ಈ ವಿಷಯವನ್ನು ಮೈಸೂರು ಜಿಲ್ಲಾ ಸಂಘದವರಿಗೆ ತಿಳಿಸಲಾಯಿತು.

ಈ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಸಭೆ ಸೇರಿ ಚರ್ಚಿಸಿದ ಪದಾಧಿಕಾರಿಗಳು ಪ್ರತಿಭಟನೆಯನ್ನು ಕೈಬಿಡಲು ತೀರ್ಮಾನಿಸಿದರು. ಬಳಿಕ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ದೇವಿ ಆನಂದ್ ಮಾತನಾಡಿ, ಮುಖ್ಯಮಂತ್ರಿಗಳು ನೀಡಿರುವ ಭರವಸೆ ಹಾಗೂ ಮಾನವೀಯತೆಯ ದೃಷ್ಟಿಯಿಂದ ಪ್ರತಿಭಟನೆಯನ್ನು ಕೈಬಿಡುತ್ತಿದ್ದೇವೆ. ಆದರೆ, ತಪ್ಪು ಮಾಡಿರುವ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವವರೆಗೆ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವೈದ್ಯರ ಕುರಿತು ನೀಡಿರುವ ಹೇಳಿಕೆ ಸರಿಯಿಲ್ಲ. ವೈದ್ಯಾಕೀಯ ವಿಚಾರಗಳ ಅರಿವಿರುವವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿ, ನೋಡೆಲ್ ಅಧಿಕಾರಿಗಳು ವೈದ್ಯಕೀಯ ವಿಷಯಕ್ಕೆ ಸಂಬAಧಿಸಿದAತೆ ಮಧ್ಯಪ್ರವೇಶ ಮಾಡದಂತೆ ಎಚ್ಚರಿಕೆವಹಿಸುವಂತೆ ಮನವಿ ಮಾಡಿದ್ದಾರೆ.

ಕೊರೋನಾ ಸೋಂಕು ಸಮುದಾಯಕ್ಕೆ ಹರಡುವುದನ್ನು ತಡೆಯಲು ರೋಗಿಗಳ ಹಿತದೃಷ್ಟಿಯಿಂದ ಆ.೨೪ ರಂದು ಕೆಲಸಕ್ಕೆ ಹಾಜರಾಗುತ್ತಿದ್ದು, ಕೊರೊನಾ ವಿರುದ್ಧ ಕಳೆದ ೬ ತಿಂಗಳಿನಿದ ನಡೆಸಿರುವ ನಿರಂತರ ಹೋರಾಟವು ವ್ಯರ್ಥವಾಗಬಾರದು ಎಂದು ಕರ್ತವ್ಯಕ್ಕೆ ಹಾಜರಾಗುತ್ತೇವೆ. , ಬಿಬಿಎಂಪಿ ಮಾದರಿಯಲ್ಲಿ ಇಲ್ಲಿಯೂ ವೈದ್ಯರನ್ನು ನೇಮಿಸುವುದರ ಜೊತೆಗೆ ಶೀಘ್ರವೇ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಇಒ ವರ್ಗಾವಣೆಗೆ ಸ್ವಾಗತ: ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವರ್ಗಾವಣೆಗೆ ಸ್ವಾಗತ ಕೋರಿದ್ದು, ತನಿಖೆಯ ಬಳಿಕ ಪ್ರಶಾಂತ್ ಕುಮಾರ್ ಅವರನ್ನು ಸಸ್ಪೆಂಡ್ ಮಾಡಬೇಕು. ಕೆಎಎಸ್, ಐಎಎಸ್ ಅಧಿಕಾರಿಗಳಿಗೆ ವೈದ್ಯಕೀಯದ ಬಗ್ಗೆ ಗೊತ್ತಿರುವುದಿಲ್ಲ. ಹೀಗಾಗಿ, ಕೊರೋನಾ ನೊಡೆಲ್ ಅಧಿಕಾರಿಗಳಾಗುವುದು ಬೇಡ .ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನ ನೇಮಕ ಮಾಡಿಕೊಳ್ಳಬೇಕು ಎಂದು ಮೈಸೂರು ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ್ ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss