Saturday, July 2, 2022

Latest Posts

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ: ಸಂಸದ ನಳಿನ್‌ರಿಂದ ಪುಷ್ಪನಮನ

ಮಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಸಂಸದರ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ , ಮ.ನ.ಪಾ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಮನೋಹರ ಶೆಟ್ಟಿ, ಮನೋಜ್ ಕುಮಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ ಹಾಗೂ ಮೋನಪ್ಪ ಭಂಡಾರಿ ಮತ್ತು ವಿನಯನೇತ್ರ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss