Sunday, August 14, 2022

Latest Posts

ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್ ರಾಜ್‌ಗೆ ಶರಣಾಗಲು ಹೇಳಲಿ: ನಳಿನ್ ಸವಾಲು

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನೈತಿಕತೆ ಇದ್ದರೆ ಆರೋಪಿ ಸಂಪತ್ ರಾಜ್‌ಗೆ ಶರಣಾಗುವಂತೆ ಸೂಚನೆ ನೀಡಲಿ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಗುರುವಾಎ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಮನೆಯ ಮೇಲಿನ ದಾಳಿ ಪ್ರಕರಣದಲ್ಲಿ ಸಂಪತ್ ರಾಜ್ ಕೈವಾಡವಿರುವುದು ತನಿಖೆಯಲ್ಲಿ ಸ್ಪಷ್ಟಗೊಂಡಿದೆ. ‘ರಾಜಕಾರಣ’ ಉದ್ದೇಶದಿಂದ ನಾವು ಅಖಂಡ ಶ್ರೀನಿವಾಸ್‌ಗೆ ಬೆಂಬಲ ಸೂಚಿಸುತ್ತಿಲ್ಲ. ಸಜ್ಜನ ಹಾಗೂ ದಲಿತ ಶಾಸಕನ ಮನೆಯ ಮೇಲೆ ದಾಳಿ ನಡೆದಾಗ ಆರೋಪಿಯ ರಕ್ಷಣೆಗೆ ನಿಲ್ಲುವುದು ಸರಿಯಲ್ಲ. ಅಖಂಡ ಶ್ರೀನಿವಾಸ್ ಅವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಹೇಳಿದರು.
ಶಿರಾ, ಆರ್‌ಆರ್ ನಗರ ಚುನಾವಣೆ ಸಂಬಂಧ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ನಳಿನ್, ಶಿರಾದಲ್ಲಿ ಸಿದ್ದರಾಮಯ್ಯ, ಆರ್‌ಆರ್ ನಗರದಲ್ಲಿ ಡಿಕೆಶಿ ಉಪಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದರು. ಶಿರಾದಲ್ಲಿ ಸೋಲಾಗಬೇಕು ಎಂದು ಡಿಕೆಶಿ, ಆರ್.ಆರ್ ನಗರದಲ್ಲಿ ಸೋಲಾಗಬೇಕು ಎಂದು ಸಿದ್ದರಾಮಯ್ಯ ಬಯಸಿದ್ದರು. ಈಗ ಇಬ್ಬರ ಆಸೆಯೂ ನೆರವೇರಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ ಎಂದು ತಮ್ಮ ಎಂದಿನ ಶೈಲಿಯಲ್ಲಿ ನಳಿನ್ ನಸುನಕ್ಕರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss