Wednesday, August 10, 2022

Latest Posts

ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸ್ ಆಯುಕ್ತರಿಗೆ ಬೆದರಿಕೆ ಹಾಕುತ್ತಿದ್ದಾರೆ. ಅವರಿನ್ನೂ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು.
ಸೋಮವಾರ ಮೂಡಿಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವ ಮನಸ್ಥಿತಿ ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ತೋರಿಸಿಕೊಳ್ಳುವ ಪ್ರಯತ್ನ ಅನ್ನಿಸುತ್ತದೆ ಎಂದರು.
ನಮ್ಮ ಸರ್ಕಾರ ಇರುವ ಸಮಯದಲ್ಲಿ ಗೂಂಡಾಗಿರಿ ರೀತಿಯಲ್ಲಿ ಬೆದರಿಕೆವೊಡ್ಡಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ. ಗೂಂಡಾ ಮನಸ್ಥಿತಿಯಿಂದ ಹೊರಬಾರದೆ ಇದ್ದಲ್ಲಿ ಅವರಿಗೆ ಮಾತ್ರವಲ್ಲ ಅವರ ಪಕ್ಷಕ್ಕೂ ಕೆಟ್ಟ ಹೆಸರು ಎಂದರು.
ಎಐಸಿಸಿ ಅಧ್ಯಕ್ಷರಾಗಿ ಗಾಂಧಿ ಮನೆತನದವರೇ ಆಗಲಿ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಹಿಟ್ಟು ಹಳಸಿತ್ತು ಎನ್ನುವ ಗಾದೆ ಮಾತನ್ನು ನೆನಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss