Monday, July 4, 2022

Latest Posts

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: 50 ಲಕ್ಷ ರೂ. ಸೀಜ್

ಬೆಂಗಳೂರು: ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆದಿದ್ದು, ೫೦ ಲಕ್ಷ ರೂ ಪತ್ತೆಯಾಗಿದೆ ಎನ್ನಲಾಗಿದೆ.
ಸಿಬಿಐ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ ವೇಳೆ ಮನೆಯಲ್ಲಿಯೇ ೫೦ ಲಕ್ಷ ಹಣ ಇದ್ದು, ಅದನ್ನು ಸೀಜ್ ಮಾಡಲಾಗಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ ಏಕಕಾಲಕ್ಕೆ ಡಿಕೆಶಿ ಹಾಗೂ ಸಹೋದರ ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇನ್ನು ಮುಂಬೈನ ಒಂದು ಕಡೆ, ಕರ್ನಾಟಕದ ೯ ಕಡೆ ಹಾಗೂ ದೆಹಲಿಯ ನಾಲ್ಕು ಕಡೆ ಸಿಬಿಐ ದಾಳಿ ನಡೆದಿದ್ದು, ದಾಖಲೆಗಳನ್ನು ಹುಡುಕಲಾಗುತ್ತಿದೆ ಎನ್ನಲಾಗಿದೆ. ಇನ್ನು ಡಿಕೆಶಿ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss