Thursday, August 11, 2022

Latest Posts

ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ: ಸಚಿವದ್ವಯರಿಂದ ವಿವಿಧ ಅಧ್ಯಯನ ವಿಭಾಗಗಳ ವೀಕ್ಷಣೆ

ಮೈಸೂರು: ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಡಿಜಿಟಲ್ ಗ್ರಂಥಾಲಯ ವಿಭಾಗವನ್ನು ಕಂಪ್ಯೂಟರ್ ಮೂಲಕ ವೀಕ್ಷಣೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವದ್ವಯರು, ಪುಸ್ತಕಗಳು, ಅಧ್ಯಯನ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ವಿಭಾಗಳನ್ನು ವೀಕ್ಷಿಸಿದರು. ಜೊತೆಗೆ ಪುಸ್ತಕಗಳ ಸಂಗ್ರಹಣೆ ಹಾಗೂ ವಿಷಯಗಳ ಬಗ್ಗೆ ಗಮನಹರಿಸಿದರು.
ಈ ವೇಳೆ ಶಾಸಕರಾದ ಎಲ್. ನಾಗೇಂದ್ರ, ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss