ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಮಕ್ಬುಲ್ ಎಂಬುವನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಪೊಲೀಸರು, ಸಿಸಿಬಿ ಹಾಗೂ ಎನ್ಐಎ ಅಧಿಕಾರಿಗಳೂ ಕೂಡ ತನಿಖೆಯನ್ನು ನಡೆಸುತ್ತಿದ್ದಾರೆ. ಗಲಭೆಯ ವೀಡಿಯೋ ದೃಶ್ಯಾವಳಿ ಸೇರಿದಂತೆ ವಿವಿಧ ಮೂಲಗಳ ಮಾಹಿತಿಯಿಂದ ಪ್ರಕರಣದಲ್ಲಿ ಭಾಗಿಯಾಗಿದ್ದಂತ 300ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆ ಮುಂದುವರೆಸಿರುವ ಡಿಜೆ ಹಳ್ಳಿ ಪೊಲೀಸರು, ಗಲಭೆ ಪ್ರಚೋದಿಸಿದ್ದಲ್ಲದೇ, ಸ್ಥಳೀಯರ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮಕ್ಬುಲ್ ಎಂಬಾತನನ್ನು ಬಂಧಿಸಿದ್ದಾರೆ.