ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ.೩ಕ್ಕೆ ಮುಂದೂಡಿಕೆಯಾಗಿದೆ.
ಡಿ.ಜೆ.ಹಳ್ಳಿ ಗಲಭೆ ಹಿಂದೆ ಸ್ಥಳಿಯ ರಾಜಕೀಯ ನಾಯಕರ ಕುಮ್ಮಕ್ಕು ಇದ್ದು, ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಬಲವಾಗಿ ಕೇಳಿ ಬಂದಿದೆ. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದ್ದು, ಕೊರೋನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.
ಈ ನಡುವೆ ಸಂಪತ್ ರಾಜ್ ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಕೋರಿ ಸಿಸಿಎಚ್ ೬೨ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನ.೩ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊಡರಿಸಿದ್ದಾರೆ.