Tuesday, September 27, 2022

Latest Posts

ಡಿಸ್ಟಲರಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ, ಓರ್ವ ಕಾರ್ಮಿಕ ಸಾವು

ಹೊಸ ದಿಗಂತ ವರದಿ, ದಾವಣಗೆರೆ:

ಡಿಸ್ಟಲರಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರ ಸುಟ್ಟ ಗಾಯಗಳಾದ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕು ದುಗ್ಗಾವತಿ ಗ್ರಾಮದ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದೆ.
ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಪುತ್ರಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಜಾನ್ ಡಿಸ್ಟಲರ್ನ್ ಗೆ ಗುತ್ತಿಗೆ ಆಧಾರದ ಮೇಲೆ ಜಾಗ ನೀಡಲಾಗಿತ್ತು.
ಡಿಸ್ಟಿಲರಿಯಲ್ಲಿ ಮದ್ಯ ತಯಾರಿಕೆ ಕೆಲಸವಾಗುತ್ತಿತ್ತು. ಕಾರ್ಖಾನೆಯಲ್ಲಿ ಶುಕ್ರವಾರ ಬೆಳಗ್ಗೆ ವೆಲ್ಡಿಂಗ್ ಕೆಲಸ ಮಾಡುವಾಗ ಆಕಸ್ಮಿಕವಾಗಿ ಬಾಟಲುಗಳ ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಜಾನ್ ಡಿಸ್ಟಿಲ ಗೆ ಗುತ್ತಿಗೆ ಪಡೆದಿದ್ದ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಮದ್ಯ ತುಂಬಿದ್ದ 22 ಟ್ಯಾಂಕ್‌ಗಳಿಗೆ ವ್ಯಾಪಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ತೀವ್ರ ಸುಟ್ಟ ಗಾಯಗಳಿಂದಾಗಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಪನಹಳ್ಳಿ, ದಾವಣಗೆರೆಯಿಂದ ಅಗ್ನಿಶಾಮಕ ದಳದ ವಾಹನಗಳು ತೆರಳಿ, ಬೆಂಕಿ ನಂದಿಸಲು ಹರಸಾಹಸ ಮಾಡುತ್ತಿವೆ. ಆದರೆ, ಬೆಂಕಿ ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!