ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಆಪ್ತ ಸಚಿನ್ ನಾರಾಯಣ್ ನಿವಾಸದ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಿ.ಎಂ ರಸ್ತೆಯ ಸಿಲ್ವರ್ ಜ್ಯುಬ್ಲಿ ಪಾರ್ಕ್ ನಿವಾಸದ ಮೇಲೆ ಸಿಬಿಐನ 9 ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ದಾಳಿ ವೇಳೆ ಸಚಿನ್ ನಾರಾಯಣ್ ಮನೆಯಲ್ಲಿ ಇಲ್ಲ ಎನ್ನಲಾಗಿದ್ದು, ಸಹೋದರ ಚೇತನ್ ನಾರಾಯಣ್ ಹಾಗೂ ಕುಟುಂಬ ಸದಸ್ಯರ ವಿಚಾರಣೆ ನಡೆಯುತ್ತಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಳಗ್ಗನಿಂದಲೂ ಮನೆಯಿಂದ ಯಾರು ಹೊರ ಬಂದಿಲ್ಲವಾದ್ದರಿಂದ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ. ಈ ಹಿಂದೆಯು ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದ ವೇಳೆಯು ಸಚಿನ್ ನಾರಾಯಣ್ ಮನೆ ಮೇಲೆ ದಾಳಿ ನಡೆದಿತ್ತು.