Wednesday, June 29, 2022

Latest Posts

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಕೂಡಲೇ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ : ಸಚಿವ ಸುಧಾಕರ್ ಟೀಕೆ

ಬೆಂಗಳೂರು : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರೆ ಬಿಜೆಪಿಗೆ ಲಾಭವೇ ಹೊರತು ಕಾಂಗ್ರೆಸ್ ಗಲ್ಲ. ಅಲ್ಲದೇ, ಅವರು ಕೆಪಿಸಿಸಿ ಅಧ್ಯಕ್ಷರಾದ ಕೂಡಲೇ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರೆ ಅದರಿಂದ ಬಿಜೆಪಿಗೆ ಲಾಭವೇ ಹೊರತು ಕಾಂಗ್ರೆಸ್ ಗೆ ಅಲ್ಲ. ಡಿಕೆಶಿಯಿಂದ ಬಿಜೆಪಿ ಮತ್ತಷ್ಟು ಸದೃಢವಾಗಲಿದೆ ಎಂದರು. ಈ ಹಿಂದೆ ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಹಾಗೂ ಹಲವು ನಾಯಕರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಆಗ ಕಾಂಗ್ರೆಸ್​ ಏನಾಗಿತ್ತು ಎಂದು ನೋಡಿದ್ದೇವೆ. ಈಗ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ ಕೂಡಲೇ ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ. ಏನೇ ಆಗಲೀ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಅವರಿಗೆ ಶುಭಾಶಯಗಳು ಕೋರುತ್ತೇನೆ ಎಂದು ಸುಧಾಕರ್​​​ ಟಾಂಗ್​​ ನೀಡಿದರು.

ಇನ್ನು ಕೊರೊನಾ ಪರಿಸ್ಥಿತಿ ನಿಯಂತ್ರಿಸುವ ಬಗ್ಗೆ ಇದೇ ವೇಳೆ ಪ್ರಸ್ತಾಪಿಸಿದ ಸಚಿವ ಸುಧಾಕರ್, ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡದೇ ಅಮಾನವೀಯವಾಗಿ ನಡೆದುಕೊಂಡಲ್ಲಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಖಾಸಗಿ ಆಸ್ಪತ್ರೆ ಲೈಸನ್ಸ್​​ ಅನ್ನೇ ರದ್ದುಗೊಳಿಸಿ, ಅಂತವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು. ಇನ್ನು ಸೋಂಕು ಹರಡದಂತೆ ಕಡಿವಾಣ ಹಾಕಲು ಈಗಾಗಲೇ ತಜ್ಞರು ಕೆಲವು ಸಲಹೆಗಳನ್ನು ಕೊಟ್ಟಿದ್ದಾರೆ. ಅದರಂತೆಯೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಾಕ್​​ಡೌನ್​​ನಿಂದ ಕೊರೊನಾ ಸೋಂಕು ಹೋಗುವುದಿಲ್ಲ. ಸದ್ಯ ಕಠಿಣ ಕ್ರಮಗಳೊಂದಿಗೆ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss