Tuesday, August 16, 2022

Latest Posts

ಮಂಡ್ಯ | ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬ-ರಕ್ತದಾನ ಶಿಬಿರ

ಮಂಡ್ಯ : ಕೊರೋನಾ ಸಮಸ್ಯೆ ಇಲ್ಲಿಗೇ ಮುಗಿಯುವುದಿಲ್ಲ. ಕೋವಿಡ್-19 ಜೊತೆಗೆ ಬದುಕುವುದನ್ನು ಕಲಿಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಟಾಸ್ಕ್ಪೋರ್ಸ್ ಸಮಿತಿ ಅಧ್ಯಕ್ಷ ಎಂ.ಎಸ್. ಚಿದಂಬರ್ ಕರೆ ನೀಡಿದರು.
ಮಂಡ್ಯ ಜಿಲ್ಲಾ ಕಾಂಗ್ರೆಸ್ ಕೋವಿಡ್-19 ಟಾಸ್ಕ್‍ಪೋರ್ಸ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ 59ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಶಿಬಿರ ಏರ್ಪಡಿಸಿ ರಕ್ತದಾನ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿ ಮಾತನಾಡಿದ ಅವರು, ಕೋವಿಡ್-19 ಇಲ್ಲಿಗೇ ಮುಗಿಯುವುದಿಲ್ಲ. ಇನ್ನೂ ಇರುತ್ತೆ. ಆದ್ದರಿಂದ ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಜಿಲ್ಲೆ ಮತ್ತು ಸಮಾಜದಿಂದ ದೂರವಾಗುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss