Monday, August 8, 2022

Latest Posts

ಡಿ.ಜಿ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆಗೆ ಕಾರಣರಾದ ಎಸ್‍ಡಿಪಿಐ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ

ಪಾಂಡವಪುರ : ಬೆಂಗಳೂರಿನ ಡಿ.ಜಿ.ಹಳ್ಳಿ ಹಾಗೂ ಕೆ.ಜೆ.ಹಳ್ಳಿ ಗಲಭೆಗೆ ಕಾರಣರಾಗಿರುವ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಭಜರಂಗಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ರಾಜಕುಮಾರ್ ವೃತ್ತದಲ್ಲಿ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ನೇತೃತ್ವದಲ್ಲಿ ಜಮಾವಣೆಗೊಂಡ ಭಜರಂಗಸೇನೆ ಕಾರ್ಯಕರ್ತರು, ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆ ನಡೆಸಿ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ತೆರಳಿದ ಕಾರ್ಯಕರ್ತರು, ಅಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಎಂ.ವರುಣ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರಿನ ಡಿ.ಜಿ.ಹಳ್ಳಿ ಹಾಗೂ ಕೆ.ಜೆ.ಹಳ್ಳಿ ಗಲಭೆಯಲ್ಲಿ ಹಿಂದೂಗಳನ್ನು, ಪೊಲೀಸರನ್ನು ಹಾಗೂ ಮಾಧ್ಯಮದವರನ್ನು ಗುರಿಯಾಗಿಟ್ಟುಕೊಂಡು ನಡೆದ ಪೂರ್ವ ನಿಯೋಜಿತ ದಾಳಿ ಇದಾಗಿದೆ. ಇದರ ಹಿಂದೆ ಮತೀಯ ಕೋಮು ಆಧಾರಿತ ಸಂಘಟನೆಗಳಾದ ಎಸ್‍ಡಿಪಿಐ ಮತ್ತು ಪಿಎಫ್‍ಐನ ನೇರ ಕೈವಾಡ ಇರುವುದು ತನಿಖೆಯಿಂದ ಬಹಿರಂಗವಾಗಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿರವರ ಮನೆಗೆ ಹಾಗೂ ಅವರ ಕಚೇರಿಗೆ ಬೆಂಕಿ ಹಚ್ಚಿರುವುದು ಹಾಗೂ ಅವರನ್ನು ಕೊಲೆ ಮಾಡಲು ಸಾವಿರಾರು ಜನ ಬಂದಿರುವುದು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು, ಪೊಲೀಸ್ ವಾಹನಗಳಿಗೆ ಜಖಂಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಕೋಮುವಾದಿ ಸಂಘಟನೆಗಳಿಗೆ ಸಂವಿಧಾನದ ಮೇಲೆ ಯಾವ ಗೌರವವೂ ಇಲ್ಲ. ಜತೆಗೆ ಕಾನೂನಿನ ಭಯವೂ ಇಲ್ಲ. ಇಡೀ ದೇಶದಲ್ಲಿ ಇವರು ಹಲವಾರು ಕಡೆ ಕೋಮು ಆಧಾರಿತ ದಂಗೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss