Tuesday, August 16, 2022

Latest Posts

ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ. ಜಾರ್ಜ್, ಪ್ರಣವ್ ಮೊಹಂತಿ, ಎ.ಎಂ. ಪ್ರಸಾದ್ ಅವರಿಗೆ ಸಮನ್ಸ್ ಜಾರಿ

ಬೆಂಗಳೂರು: ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ.

ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಬಿಐ ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನಿಹಾಲ್ ಗಣಪತಿ, ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ತ್ಯಾಗರಾಜ್ ಎನ್. ಇನವಳ್ಳಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್​ ಅನ್ನು ತಿರಸ್ಕರಿಸಿದ್ದಾರೆ.

2016ರ ಜುಲೈ 7ರಂದು ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಸ್ಥಳೀಯ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಕೆ.ಜೆ. ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದು, ನಾನು ಸಾವನ್ನಪ್ಪಿದ್ದರೆ ಅದಕ್ಕೆ ಈ ಮೂವರೇ ಕಾರಣ ಎಂದು ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss