ದಿಗಂತ ವರದಿ, ಮಂಗಳೂರು:
ಬಿಜೆಪಿ ರಾಜ್ಯ ಘಟಕದ ಮುಂದಿನ ರಾಜ್ಯ ಕಾರ್ಯಕಾರಿಣಿ ಸಭೆ ಡಿ.೫ರಂದು ಬೆಳಗಾವಿಯಲ್ಲಿ ನಡೆಯಲಿದೆ. ನ.೨೦ರಂದು ರಾಯಚೂರಿನಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದರು.
ಮಂಗಳೂರಿನಲ್ಲಿ ಗುರುವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ಪ್ರಕಟಿಸಿದರು.
ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ದ.ಕ. ಜಿಲ್ಲಾ ಘಟಕ ಯಶಸ್ವಿ ಮತ್ತು ಅಚ್ಚುಕಟ್ಟಾಗಿ ಸಂಘಟಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರ ಕಡೆ ನಡೆಯುವ ಕಾರ್ಯಕಾರಿಣಿ ಸಭೆಗೆ ಮಂಗಳೂರಿನ ತಂಡ ಮಾನದಂಡ ನೀಡಿದೆ. ಅದನ್ನು ರಾಜ್ಯದ ಇತರ ಜಿಲ್ಲೆಗಳು ಅನುಸರಿಸಬೇಕಿದೆ ಎಂದರು.