Thursday, February 25, 2021

Latest Posts

ಡಿ.5 ರಿಂದ ಡಿಸಿ ಕಚೇರಿ ಎದುರು ಬಸವರಾಜ ಹೊರಟ್ಟಿ ಉಪವಾಸ ಸತ್ಯಾಗ್ರಹ

ಹೊಸ ದಿಗಂತ ವರದಿ ಧಾರವಾಡ:

ಎನ್. ಎ. ಮುತ್ತಣ್ಣ ಪೊಲೀಸ ಮಕ್ಕಳ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಮಾಡುವುದರ ಜೊತೆಗೆ ಶಾಲೆ ಆರಂಭಿಸಲು ಅನುಮತಿ ನೀಡಬೇಕು ಎಂದು ವಿಧಾನ ಪರಿಷತನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ೨೦೨೦-೨೧ ನೇ ಸಾಲಿನಲ್ಲಿ ೧೨೫ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರ ಪೈಕಿ ೮೦ ವಿದ್ಯಾರ್ಥಿಗಳು ಪ್ರವೇಶ ಪಡೆದು ಆನ್ ಲೈನ್ ತರಗತಿಗಳಿಗೆ ಹಾಜರಾಗಿದ್ದಾರೆ. ಆದರೆ ಕಳೆದ ೯ ತಿಂಗಳಿಂದ ಶಾಲೆಯ ಶಿಕ್ಷಕರಿಗೆ ವೇತನವೇ ನೀಡಿಲ್ಲ ಎಂದು ದೂರಿದರು.

ಈ ಶಾಲೆ ಉಳಿಸಲು ಸಿಎಂ ಭೇಟಿಯಾಗಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಹಾಗೂ ಶಾಲೆಯ ಅನುದಾನ ಬಿಡುಗಡೆ ಮಾಡಲು ಕೋರಿದರೂ ಈವರೆಗೂ ಸ್ಪಂದನೆ ಲಭಿಸಿಲ್ಲ. ಈ ಕಾರಣದಿಂದ ಬೇಸತ್ತು ಡಿ.೫ ರಿಂದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!