ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜಗತ್ಪ್ರಸಿದ್ಧ ಸಾಮಾಜಿಕ ಜಾಲತಾಣ ಕಂಪನಿ ಟ್ವಿಟರ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ರದ್ದು ಮಾಡಿರುವ ಬೆನ್ನಲ್ಲೇ ಇದೀಗ ಟ್ರಂಪ್ ಬೆಂಬಲಿಗರ ಟ್ವಿಟರ್ ಖಾತೆಯನ್ನೂ ಸಹ ರದ್ದು ಮಾಡಿದೆ.
ಟ್ರಂಪ್ ಅವರ ಪ್ರಚೋದನಕಾರಿ ಕರೆಗೆ ಓ ಗೊಟ್ಟು ಅವರ ಬೆಂಬಲಿಗರು ಅಮೆರಿಕ ಸಂಸತ್ತಿನ ಮೇಲೆ ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 70 ಸಾವಿರಕ್ಕೂ ಹೆಚ್ಚು ಟ್ವಂಪ್ ಬೆಬಂಲಿಗರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ನೂತನ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರ ಪದಗ್ರಹಣ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂಬುದು ಟ್ರಂಪ್ ಅವರ ಕೊನೆಯ ಟ್ವೀಟ್ ಆಗಿತ್ತು. ಈ ಟ್ವೀಟ್ ಮಾಡುತ್ತಿದ್ದಂತೆ ಟ್ವಿಟರ್ ಕಂಪನಿ ಟ್ರಂಪ್ ಖಾತೆಯನ್ನು ಶಾಶ್ವತವಾಗಿ ರದ್ದುಪಡಿಸಿತ್ತು.