Wednesday, August 10, 2022

Latest Posts

ಡ್ರಗ್ಸ್ ಜಾಲ ಪ್ರಕರಣ: ಸದ್ಯಕ್ಕಿಲ್ಲ ರಾಗಿಣಿಗೆ ಬಿಡುಗಡೆ ಭಾಗ್ಯ, ಜಾಮೀನು ಅರ್ಜಿ ಮುಂದೂಡಿಕೆ!

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ ನಟಿ ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು, ಎನ್ ಡಿ ಪಿ ಎಸ್ ನ್ಯಾಯಾಲಯವು ಸೆಪ್ಟೆಂಬರ್ ಮುಂದೂಡಿದೆ. ಈ ಮೂಲಕ ನಟಿ ರಾಗಿಣಿಗೆ ಮೂರು ದಿನ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.
ನಟಿ ರಾಗಿಣಿ ದ್ವಿವೇದಿ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಬುಧವಾರ ನ್ಯಾಯಾಲಯದ ಮುಂದೆ ನಟಿ ರಾಗಿಣಿ ಜಾಮೀನು ಅರ್ಜಿ ಬಂದಿದ್ದು ತನಿಖೆ ಪ್ರಗತಿಯಲ್ಲಿದ್ದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.
ಇನ್ನು ನಟಿ ಸಂಜನಾ ಗಲ್ರಾನಿ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆ ಸಂಜನಾರನ್ನು ಪೋಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss