Thursday, August 11, 2022

Latest Posts

ಡ್ರಗ್ಸ್ ದಂಧೆ : ಬಂಧಿತ ಡ್ಯಾನ್ಸರ್ ಕಿಶೋರ್, ಅಕೀಲ್ ಗೆ ಅ.9ರವರೆಗೆ ನ್ಯಾಯಾಂಗ ಬಂಧನ

ಮಂಗಳೂರು: ಡ್ರಗ್ಸ್ ಬಲೆಯಲ್ಲಿ ಸಿಲುಕಿರುವ ಆರೋಪಿಗಳಿಗೆ ಮಂಗಳೂರಿನ ನ್ಯಾಯಾಲಯ ಅ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸೆ.19ರಂದು ಡ್ರಗ್ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾದ ಕಿಶೋರ್ ಅಮನ್ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆ ಬಳಿಕ ಡ್ರಗ್ ಲಿಂಕ್ ಹೊಂದಿದ್ದ ಅಕೀಲ್ ನೌಶೀಲ್, ತರುಣ್ ರಾಜ್ ಹಾಗೂ ಕಿಶೋರ್ ಸ್ನೇಹಿತೆ ಮಣಿಪುರ ಮೂಲಕ ಆಸ್ಕಾ ಎಂಬಾಕೆಯನ್ನು ಬಂಧಿಸಲಾಗಿತ್ತು.
ಶುಕ್ರವಾರ ಕಿಶೋರ್ ಶೆಟ್ಟಿ, ಅಕೀಲ್ ನೌಶೀಲ್, ತರುಣ್‌ರಾಜ್ ಇವರುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಹಾಗೂ ನೌಶೀಲ್‌ರನ್ನು ಅ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಾರ್ಕೋಟಿಕ್ ಕ್ರೈಂ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss