ಡ್ರಗ್ಸ್ ಪಾರ್ಟಿ ಪ್ರಕರಣ: ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾದ ನಟಿ ಹೇಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡ್ರಗ್ಸ್ ಪಾರ್ಟಿ (Drugs) ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಇಂದು ಬೆಂಗಳೂರಿನ ಸಿಸಿಬಿ (CCB) ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಮೊದಲು ಹಾಜರಾಗುವಂತೆ ಅವರಿಗೆ ಮೊದಲ ನೊಟೀಸ್ ನೀಡಲಾಗಿತ್ತು. ಆದ್ರೆ ಗೈರಾಗಿದ್ದರು.

ಬಳಿಕ ಹೇಮಾ 2ನೇ ನೊಟೀಸ್ ಕೂಡ ನೀಡಿದ್ದರು ಸಿಸಿಬಿ ಅಧಿಕಾರಿಗಳು. ಇಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಹೇಮಾ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಹೇಮಾ ಅವರ ವಿಚಾರಣೆಯನ್ನು ಅಧಿಕಾರಿಗಳು ಸಿಸಿಬಿ ಕಚೇರಿಯಲ್ಲಿ ಮಾಡುತ್ತಿದ್ದಾರೆ.

ಮೊನ್ನೆಯಷ್ಟೇ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!