ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಕೂದಲು ಸ್ಯಾಂಪಲ್ ಸಂಗ್ರಹಕ್ಕೆ ಕೋರ್ಟ್ ಅನುಮತಿ ನೀಡಿದೆ.
ನಟಿಯರು ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬ ಆರೋಪ ಸಂಬಂಧ ಹೆಚ್ಚಿನ ತನಿಖೆ ನಡೆಸಲು ಅವರ ಕೂದಲು ನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯವಿದೆ. ಆದರೆ, ಆರೋಪಿತ ನಟಿಯರು ಇದಕ್ಕೆ ಸಹಕರಿಸುತ್ತಿಲ್ಲ. ಹಾಗಾಗಿ ಕೂದಲು ಸ್ಯಾಂಪಲ್ ಪಡೆಯಲು ಅನುಮತಿ ನೀಡಬೇಕು ಎಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ಅಧಿಕಾರಿಗಳ ಮನವಿಗೆಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಒಪ್ಪಿಗೆ ಸೂಚಿಸಿದ್ದು, ಕೂದಲು ಸ್ಯಾಂಪಲ್ ಸಂಗ್ರಹಿಸಲು ತನಿಖಾಧಿಕಾರಿಗಳಿಗೆ ಅನುಮತಿ ನೀಡಿ ಆದೇಶಿಸಿದೆ.