Tuesday, July 5, 2022

Latest Posts

ಡ್ರಗ್ಸ್ ಮಾಫಿಯಾದಲ್ಲಿರುವ ಪ್ರಭಾವಿಗಳ ಹೆಸರು ಬಹಿರಂಗಪಡಿಸಿ : ಸಲೀಂ ಅಹಮ್ಮದ್ ಒತ್ತಾಯ

ಮಡಿಕೇರಿ: ಡ್ರಗ್ಸ್ ಮಾಫಿಯಾದಲ್ಲಿ ಯಾರೆಲ್ಲ ಪ್ರಭಾವಿಗಳಿದ್ದರೋ ಅವರ ಹೆಸರನ್ನು ಸರಕಾರ ಬಹಿರಂಗಪಡಿಸಬೇಕು ಅಲ್ಲದೆ ಯಾರು ಪೊಲೀಸರ ಮೇಲೆ ಒತ್ತೆ ಹೇರುತ್ತಿದ್ದಾರೆಂಬುದು ಕೂಡಾ ರಾಜ್ಯದ ಜನತೆಗೆ ತಿಳಿಯಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಆಗ್ರಹಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡ್ರಗ್ಸ್ ದಂಧೆಗೆ ತಕ್ಷಣ ಕಡಿವಾಣ ಹಾಕಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ದಂಧೆಕೋರರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರಲ್ಲದೆ,ಪೊಲೀಸರಿಗೆ ಡ್ರಗ್ಸ್ ದಂಧೆಯ ವಿಚಾರ ಮೊದಲೇ ತಿಳಿದಿತ್ತು. ಹೀಗಿದ್ದರೂ ಕಾರ್ಯಪ್ರವೃತ್ತವಾಗುವಲ್ಲಿ ಸರ್ಕಾರ ಎಡವಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ರವಿಕುಮಾರ್ ಆರೋಪಿಸಿದ್ದು, ಮೊದಲು ಅವರು ಪೊಲೀಸರಂತೆ ಮಾತನಾಡುವುದು ನಿಲ್ಲಿಸಲಿ. ಯಾರೇ ತಪ್ಪು ಮಾಡಿದರೂ ಸೂಕ್ತ ತನಿಖೆಯ ಮೂಲಕ ಸತ್ಯ ಬೆಳಕಿಗೆ ಬರಲಿದೆ ಎಂದು ಸಲೀಂ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪಕ್ಷದ ಪ್ರಮುಖರಾದ ಚಂದ್ರಮೌಳಿ, ಎ.ಎಸ್.ಪೊನ್ನಣ್ಣ, ಹರೀಶ್ ಬೋಪಣ್ಣ ಹಾಗೂ ಕೆಪಿಸಿಸಿ ಮುಖಂಡರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss