ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಸಂಬಂ ಧಿಸಿದಂತೆ ಸಿಸಿಬಿಯಿಂದ ವಿಚಾರಣೆಗೊಳಗಾಗಿ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿ ಸಂಜನಾ ಗಲ್ರಾನಿಯವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ೧ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರಕ್ಕೆ ವರ್ಗಾಯಿಸಿದ್ದಾರೆ.
ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸಂಜನಾ ಅವರನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.ಈ ವೇಳೆ ಸಂಜನಾ ಪರ ವಕೀಲ ಶ್ರೀನಿವಾಸ ರಾವ್ ಅವರು ಸಂಜನಾ ಅವರಿಗೆ ಜಾಮೀನು ನೀಡಬೇಕೆಂದು ಮನವಿ ಸಲ್ಲಿಸಿದರು. ಆದರೆ, ವಾದ-ಪ್ರತಿವಾದದ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್ 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಸೂಚಿಸಿದೆ.
ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಅವರನ್ನು ಇಂದು ಸಂಜೆ ವೇಳೆ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗುತ್ತದೆ.